LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಟಿಂಗ್ ಆಪರೇಷನ್: ಪ್ರಿಯಾಂಕ್ ಖರ್ಗೆ ಮಾತಿಗೆ ಜೆಡಿಎಸ್ ತಿರುಗೇಟು

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸ್ಟಿಂಗ್ ಆಪರೇಷನ್ ಬಗ್ಗೆ ಬೇರೆಯವರು ಮಾತನಾಡುವ ಹಾಗಿಲ್ಲ ಎಂದು ಹೇಳಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್  ತಿರುಗೇಟು ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ತೀವ್ರ ವಾಗ್ದಾಳಿ ನಡೆಸಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸುವುದು ತಪ್ಪೇ? ಅದರ ಬಗ್ಗೆ ಬೇರೆಯವರು ಮಾತನಾಡುವ ಹಾಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಎಂದು ಕೇಳಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸಲು, ನ್ಯಾಯಕ್ಕಾಗಿ ಧ್ವನಿ ಎತ್ತಲು ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚಾರಿತ್ರ್ಯ ಹರಣ ಮಾಡುತ್ತಿರುವವರು ಯಾರು? ಅವರ ವಿರುದ್ಧ ಸ್ಟಿಂಗ್ ಮಾಡಿದ ಆ ಮಹಾನಾಯಕ ಯಾರು? ಅವರ ಹೆಸರು ಬಹಿರಂಗಪಡಿಸಲು ನಿಮ್ಮ ಸರ್ಕಾರ ಯಾಕೆ ಮೀನಾಮೇಷ ಎಣಿಸುತ್ತಿದೆ ಎಂದು ಕೇಳುವ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST