LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತ ತಡೆಗೆ ಕಟ್ಟುನಿಟ್ಟನ ನಿಯಮ ಪಾಲಿಸಿ: ಡಿಸಿ ಟಿ.ಭೂಬಾಲನ್

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ನಿಯಯ, ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಡ್ಡಾಯವಾಗಿ ರಸ್ತೆ ನಿಯಮಗಳ ಪಾಲನೆ ಮಾಡುವಂತೆ ಸೂಕ್ತ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ತಡೆಯುವ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಅನಗತ್ಯವಾದ ರೋಡ್ ಬ್ರೆಕ್ ಗಳನ್ನು ತೆಗೆಯಬೇಕು. ರಸ್ತೆ ತಿರುವುಗಳಲ್ಲಿ ಅಗತ್ಯ ಮಾಹಿತಿ ಹಾಗೂ ಸೂಚನಾ ಫಲಕ ಅಳವಡಿಸಬೇಕು. ಪದೇ ಪದೇ ಅಪಘಾತಗಳು ಸಂಭವಿಸುವ ಪ್ರದೇಶ, ಸ್ಥಳಗಳಲ್ಲಿ ಎಚ್ಚರಿಕೆ ಮಾಹಿತಿ ವಿವರದ ಫಲಕ ಹಾಕಬೇಕು. ಅಪಘಾತಗಳು ಸಂಭವಿಸದಂತೆ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಇಟಗಿ ಪೆಟ್ರೋಲ್ ಪಂಪ್‌ದಿಂದ  ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದವರಗೆ ಸುಗಮ ಸಂಚಾರಕ್ಕಾಗಿ ಅಗತ್ಯ ಕಾರ್ಯ ಕೈಗೊಂಡು ಅನೂಕೂಲ ಕಲ್ಪಿಸಬೇಕು. ನಗರದಲ್ಲಿ ಸಂಚಾರದ ದಟ್ಟನೆ ಉಂಟಾಗದಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗಳನ್ನು ಸಮರ್ಪಕವಾಗಿ ನಿಯಮಾನುಸಾರವಾಗಿ ನಿರ್ಮಿಸಬೇಕು. ರಸ್ತೆಯ ಮಧ್ಯದಲ್ಲಿ ಡ್ರೈನೇಜ್ ಗಳಿದ್ದರೆ ಮಾಹಿತಿ ಫಲಕದ ಜೊತೆಗೆ ರಸ್ತೆ ನಿರ್ವಹಣೆ ಮಾಡಬೇಕು. ಹೊಸದಾಗಿ ನಿರ್ಮಾಣವಾಗಿರುವ ಸಿಸಿ ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆಯಾಗುವ ವಸ್ತುಗಳು ತೆರವುಗೊಳಿಸಬೇಕು ಎಂದು ಸೂಚಿಸಿದರು.

ಈಗಾಗಲೇ ಕಬ್ಬಿನ ಕಟಾವು ನಡೆಯುತ್ತಿರುವದರಿಂದ ಕಬ್ಬು ಸಾಗಿಸುವ ವಾಹನಗಳು ಹಾಗೂ ತೊಗರಿ ರಾಶಿ ಮಶಿನ್ ಗಳಿಗೆ ರೇಡಿಯಂ ಸ್ಟಿಕರ್ ಅಂಟಿಸಬೇಕು. ರಸ್ತೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ಆಸ್ಪತ್ರೆಗಳ ಸಹಾಯವಾಣಿ ಫಲಕ ಅಳವಡಿಸಬೇಕು ಎಂದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಪೀಟರ್ ಅಲೆಕ್ಸಾಂಡರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST