LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಪ್ರತಿಭಟನಾಕಾರರ ಮೇಲಿನ ಎಫ್ಐಆರ್ ರದ್ದುಪಡಿಸಿದ ಸುಪ್ರೀಂ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಜುಲೈನಲ್ಲಿ ನಡೆದ ಪ್ರತಿಭಟನೆ ವೇಳೆ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಾದ ಎಫ್ಐಆರ್ ಗಳನ್ನುರದ್ದುಗೊಳಿಸುವಂತೆ ದೆಹಲಿ ಪೊಲೀಸರು, ಮಹಾರಾಷ್ಟ್ರ, ಬಿಹಾರ, ಅಸ್ಸಾ, ಪಶ್ಚಿಮ ಬಂಗಾಳ ರಾಜ್ಯಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ವಿ.ಮೋಹನಾ, ಜಾಯ್ ಮಾಲ್ಯಾ ಬಾಗ್ಚಿ ಅವರಿದ್ದ ಪೀಠ ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸಂವಿಧಾನದ 142ನೇ ವಿಧಿಯಡಿ ಸುಪ್ರೀಂ ಕೋರ್ಟ್ ಗೆ ಇರುವ ವಿಶೇಷ ಅಧಿಕಾರ ಬಳಸಿ ಎಫ್ಐಆರ್ ರದ್ದುಗೊಳಿಸುವಂತೆ ಭಾರತ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದ್ದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST