LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಯೋತ್ಪಾದಕರ ಭೀಭತ್ಸ ಕೃತ್ಯ, ವಿಶ್ವ ನಾಯಕರ ಖಂಡನೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಭೀಕರ ದಾಳಿಯಲ್ಲಿ 28 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ ಕನ್ನಡಿಗರು ಇದ್ದಾರೆ ಎಂದು ಹೇಳಲಾಗುತ್ತಿದೆ. ಪ್ರವಾಸಕ್ಕೆ ಹೋದವರು ಪ್ರಾಣ ಕಳೆದುಕೊಂಡ ಕರುಣಾಜನಕ ದೃಶ್ಯಗಳು ಎಲ್ಲರ ಎದೆಯನ್ನು ನಡುಗಿಸುತ್ತಿದೆ. ಈ ದಾಳಿಯನ್ನು ವಿಶ್ವದ ನಾಯಕರು ಖಂಡಿಸಿದ್ದಾರೆ. ರಷ್ಯ ಅಧ್ಯಕ್ಷ ಪುಟಿನ್, ಅಮೆರಿಕ ಅಧ್ಯಕ್ಷ ಟ್ರಂಪ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ಸೇರಿ ಹಲವು ನಾಯಕರು ಖಂಡಿಸಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಅಮೆರಿಕ ಜೊತೆಗೆ ನಿಂತುಕೊಳ್ಳುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಬೆಂಬಲ ಸೂಚಿಸಿದ್ದಾರೆ. ರಷ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿಯೊಂದಿಗೆ ಮಾತನಾಡಿ, ಭಾರತದೊಂದಿಗೆ ನಿಲ್ಲುವುದಾಗಿ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಜೊತೆಗೆ ಇಸ್ರೇಲ್ ನಿಂತಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮೊದಲ ಭಾರತೀಯ ಭೇಟಿಯ ವೇಳೆ ಈ ಘಟನೆ ನಡೆದಿದ್ದು, ಅವರು ಸಹ ಇದನ್ನು ಖಂಡಿಸಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಯಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ದಾಳಿಯ ಹೊಣೆ ಹೊತ್ತುಕೊಂಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST