LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟೆಸ್ಟ್ ರ್ಯಾಕಿಂಗ್: ಬೂಮ್ರಾ ಫಸ್ಟ್.. ಜೈಸ್ವಾಲ್ ಸೆಕೆಂಡ್

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಮತ್ತೊಂದು ಖುಷಿಯಾಗಿದೆ. ಐಸಿಸಿ ಟೆಸ್ಟ್ ರ್ಯಾಕಿಂಗ್ ನಲ್ಲಿ ಭಾರತದ ಆಟಗಾರರು ಅಗ್ರ ಸ್ಥಾನ ಪಡೆದಿದ್ದಾರೆ. ಪರ್ಥ್ ಟೆಸ್ಟ್ ನಲ್ಲಿ 8 ವಿಕೆಟ್ ಪಡೆದು ಸಂಭ್ರಮಿಸಿರುವ ಜಸ್ಪ್ರೀತ್ ಬೂಮ್ರಾ 883 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಸೌಥ್ ಆಫ್ರಿಕಾದ ಕಗಿಸೋ ರಬಾಡ್ 872 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

860 ಅಂಕಗಳಿಂದ ಹೇಜಲ್ ವುಡ್ 3ನೇ ಸ್ಥಾನ ಹಾಗೂ ಭಾರತದ ಅನುಭವಿ ಸ್ಪೀನ್ ಬೌಲರ್ ರವಿಚಂದ್ರನ್ ಅಶ್ವಿನ್ 807 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. 6ನೇ ಸ್ಥಾನದಲ್ಲಿದ್ದ ರವೀಂದ್ರ ಜಡೇಜಾ 1 ಸ್ಥಾನ ಕುಸಿದು 7ಕ್ಕೆ ಬಂದಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ಜಡೇಜಾ ಪ್ರಥಮ, ಅಶ್ವಿನ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಬ್ಯಾಟಿಂಗ್ ನಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ 825 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇಂಗ್ಲೆಂಡ್ ನ ಜೋ ರೂಟ್ 903 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. 736 ಅಂಕಗಳಿಂದ ರಿಷಬ್ ಪಂತ್ 6ನೇ ಸ್ಥಾನ, ಕಿಂಗ್ ಕೊಹ್ಲಿ 689 ಅಂಕಗಳಿಂದ 13ನೇ ಸ್ಥಾನದಲ್ಲಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST