ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗುರುವಾರ ಮಧ್ಯಾಹ್ನ ಲೋಕಸಭೆಗೆ ತೆರಳಿ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಸಲ್ಲಿಸಿದರು. ವಿಶೇಷ ಕಾರ್ಯದರ್ಶಿ ಪ್ರಭುಶಂಕರ ಅದನ್ನು ಸ್ವೀಕರಿಸಿದ್ದರು. ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಪತ್ನಿಯ ಅನಾರೋಗ್ಯದ ಕಾರಣಕ್ಕೆ ಇಂದೋರ್ ಗೆ ಹೋಗಿದ್ದ ರಾಜ್ಯಪಾಲರು ಗುರುವಾರ ರಾತ್ರಿ ಬೆಂಗಳೂರಿಗೆ ಬಂದರು. ಶುಕ್ರವಾರ ಮುಂಜಾನೆ ರಾಜೀನಾಮೆ ಅಂಗೀಕರಿಸಿದ್ದಾರೆ.
ಸಿಎಂ ರಾಜೀನಾಮೆ ಅಂಗೀಕಾರವಾಗಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ. ಕಾಂಗ್ರೆಸ್ ನ ಸಿಎಲ್ ಪಿ ಸಭೆಯಲ್ಲಿ ಹೊಸ ನಾಯಕನ ಆಯ್ಕೆ ನಡೆಯುತ್ತೆ ಅಥವ ಈಗಾಗ್ಲೇ ಬಹಿರಂಗಗೊಂಡಿರುವ ಡಿ.ಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಲಿದ್ದು, ರಾಜ್ಯಪಾಲರನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮನವಿ ಮಾಡಲಿದ್ದಾರೆ. ಇನ್ನು ಸಿದ್ದರಾಮಯ್ಯನವರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ.



