LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ವ್ಯಕ್ತಿಯ ಭೀಕರ ಹತ್ಯೆ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪಟ್ಟಣದ ಬಸ್ ನಿಲ್ದಾಣದ ಹತ್ತಿರುವ ಅಂಜುಮಾನ್ ಕಾಲೇಜು ಹಾಗೂ ಸರ್ಕಾರಿ ಶಾಲೆಯ ಆವರಣದಲ್ಲಿ ವ್ಯಕ್ತಿಯೊಬ್ಬನ ಭೀಕರ ಹತ್ಯೆ ನಡೆದಿದೆ. ಶರಣಗೌಡ ಕಕ್ಕಳಮೇಲಿ(38) ಹತ್ಯೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಇದರಿಂದಾಗಿ ಇಡೀ ಪಟ್ಟಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಯಾರು ಕೊಲೆ ಮಾಡಿದ್ದು, ಯಾವ ಕಾರಣಕ್ಕೆ ಈ ಕೃತ್ಯ ನಡೆದಿದೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಇತ್ತೀಚೆಗೆ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಿವೆ. ಇದರಿಂದಾಗಿ ಸಾರ್ವಜನಿಕರು ಆತಂಕದಲ್ಲಿ ಜೀವನ ಮಾಡುವಂತಾಗಿದೆ ಎಂದು ಹೇಳುತ್ತಿದ್ದಾರೆ. ಸಣ್ಣಪುಟ್ಟ ವಿಚಾರಕ್ಕೂ ಹೊಡೆದಾಟ, ಬಡಿದಾಟ ಸೇರಿದಂತೆ ಗಂಭೀರ ಸ್ವರೂಪದ ಕೃತ್ಯಗಳು ನಡೆಯುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST