ಪ್ರಜಾಸ್ತ್ರ ಸುದ್ದಿ
ಅಹಮದಾಬಾದ್(Ahmedabad): ಐಪಿಎಲ್-2026 ಫೈನಲ್ ಪಂದ್ಯದಲ್ಲಿ ಸೋತು ನಿರಾಸೆಯಲ್ಲಿದ್ದ ಗುಜರಾತ್ ಟೈಟನ್ಸ್ ತಂಡಕ್ಕೆ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಪಂದ್ಯ ಮುಗಿಸಿಕೊಂಡು ತೆರಳುತ್ತಿದ್ದ ತಂಡದ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಆಟಗಾರರು ಬಸ್ಸಿನಲ್ಲಿ ಸಿಲುಕಿಕೊಂಡು ಒದ್ದಾಡಿದ ಘಟನೆ ನಡೆದಿದೆ.
ಶಾರ್ಟ್ ಸರ್ಕೀಟ್ ನಿಂದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 1 ಗಂಟೆಗಳ ಕಾಲ ಬಸ್ಸಿನಲ್ಲಿ ಸಿಲುಕಿ ಒದ್ದಾಡಿದ್ದಾರೆ. ನಂತರ ಆಟಗಾರರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲವೆಂದು ತಿಳಿದು ಬಂದಿದೆ.



