LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಜಲಧಾರೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕೇಂದ್ರ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಅಲೋಕ ತಿವಾರಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಧಾರೆ ಯೋಜನೆಯಡಿಯ ಸ್ಕೀಮ್-1 ಹಾಗೂ ಸ್ಕೀಮ್-2ರ ಪ್ರಗತಿ ಪರಿಶೀಲನಾ ಸಭೆಯು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಲಧಾರೆ ಯೋಜನೆಯಡಿಯ ಸ್ಕೀಮ್-1ರಡಿ ಬರುವ ವಿಜಯಪುರ, ಇಂಡಿ ಹಾಗೂ ಬಸವನ ಬಾಗೇವಾಡಿ ತಾಲೂಕಿನ 702 ಜನ ವಸತಿಗಳು ಹಾಗೂ 5 ಪುರಸಭೆಗಳಿಗೆ ಕುಡಿಯುವ ನೀರೋದಗಿಸುವ ಯೋಜನೆ ಹಾಗೂ ಜಲಧಾರೆ ಯೋಜನೆಯಡಿಯ ಸ್ಕೀಮ್-2ರ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕಿನ 343 ಜನವಸತಿಗಳ ಹಾಗೂ 6 ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳ ಪ್ರಗತಿ ಕುರಿತು ಪಿಪಿಟಿ ಮೂಲಕ ಪ್ರಸ್ತುತಪಡಿಸಲಾಯಿತು.

ಈ ಯೋಜನೆಯ ಘಟಕಗಳಾದ ಜಾಕ್‌ವೆಲ್, ಡಬ್ಲ್ಯೂ.ಟಿಪಿ, ಜಡ್.ಬಿಆರ್ ಹಾಗೂ ಇತರೆ ಅಂಶಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ವಿವರಿಸಲಾಯಿತು. ಹೆಚ್ಚುವರಿ ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಜಲಧಾರೆ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಸಭೆಯಲ್ಲ್ಲಿ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಕೇಂದ್ರದ ಅಧಿಕಾರಿಗಳಾದ ರಾಜೇಶ ಕುಮಾರ ಲುಹಾದಿಯಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ಜಿಲ್ಲೆಯ ಎಲ್ಲ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಜಲಧಾರೆ ಯೋಜನೆಯ ಕಾಮಗಾರಿ ಗುತ್ತಿಗೆದಾರರು, ಯೋಜನಾ ನಿರ್ವಹಣೆ ಸಮಾಲೋಚಕರು ಹಾಗೂ ಇತರರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST