LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ವಿದ್ಯಾರ್ಥಿಗಳಿಗೆ ರಂಗ ತರಬೇತಿ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಮಾಧ್ಯಮರಂಗ ಫೌಂಡೇಶನ್ ವತಿಯಿಂದ ಪಟ್ಟಣದಲ್ಲಿ 2024 ಅಕ್ಟೋಬರ್ 5ರಿಂದ 20ರ ತನಕ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ರಂಗ ತರಬೇತಿ ಶಿಬಿರ ಹಮ್ಮಿಕೊಂಡಿದೆ. ಸಿಂದಗಿ ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 5ರಿಂದ 9ನೇ ತರಗತಿ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ಇಲ್ಲಿ ಅಭಿನಯ, ನೃತ್ಯ, ಹಾಡು, ರೂಪಕ ಸೇರಿದಂತೆ ರಂಗಭೂಮಿಯ ವಿವಿಧ ಚಟುವಟಿಕೆಗಳನ್ನು ಕಲಿಸಿಕೊಡಲಾಗುತ್ತೆ ಎಂದು ತಿಳಿಸಲಾಗಿದೆ.

ಪಟ್ಟಣದಲ್ಲಿರುವ ತಹಶೀಲ್ದಾರ್ ಕಚೇರಿ ಆವರಣದಲ್ಲಿನ ಸ್ತ್ರೀ ಶಕ್ತಿ ಭವನದಲ್ಲಿ ಪ್ರತಿ ದಿನ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಶಿಬಿರ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಸಾಹಿತ್ಯ, ರಂಗಭೂಮಿ ಸೇರಿದಂತೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಧ್ಯಮರಂಗ ಫೌಂಡೇಶನ್ ನಾಡಿನ ಬೇರೆ ಬೇರೆ ಭಾಗಗಳಲ್ಲಿ ತುಂಬಾ ಸೃಜನಶೀಲ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಅದೇ ರೀತಿ ಸಿಂದಗಿಯಲ್ಲಿಯೂ ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡಿದೆ. ಈ ಬಾರಿ ಪಟ್ಟಣದಲ್ಲಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ರಂಗ ತರಬೇತಿ ನೀಡುತ್ತಿದೆ. ಇದರಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ 9035397009 ನಂಬರ್ ಗೆ ಸಂಪರ್ಕಿಸಬಹುದು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST