LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕುತಂತ್ರಗಳಿಗೆ ಉಪ ಚುನಾವಣೆಯಲ್ಲಿ ಉತ್ತರ: ಸುರೇಶ ಪೂಜಾರ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಸೇರಿದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರ, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ. ಐದು ಗ್ಯಾರೆಂಟಿಗಳನ್ನು ಜಾರಿಗೆ ತೆಗೆದುಕೊಂಡು ಬಂದಿದೆ. ಅದರ ಬಗ್ಗೆಯೂ ಬಿಜೆಪಿ ಜನರಲ್ಲಿ ತಪ್ಪು ಸಂದೇಶ ನೀಡಿತು. ವಕ್ಫ್ ವಿಚಾರದಲ್ಲಿಯೂ ಅಪಪ್ರಚಾರ ಮಾಡಿತು. ವಿರೋಧ ಪಕ್ಷಗಳ ಕುತಂತ್ರಗಳಿಗೆ ಉಪ ಚುನಾವಣೆಯಲ್ಲಿ ಜನರು ಉತ್ತರ ನೀಡಿದ್ದಾರೆ. ಅವರೆಲ್ಲರಿಗೂ ಪಕ್ಷದ ಪರವಾಗಿ, ಶಾಸಕರ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಗಳು ಕೆಲಸ ಮಾಡುತ್ತಿವೆ. ಮಹಿಳೆಯರು, ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಜಯಪುರ ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಹೇಳಿದರು. ಮುಖಂಡರಾದ ಸುರೇಶ ಮಳಲಿ, ಪರಮಾನಂದ ಬಗಲಿ ಮಾತನಾಡಿದರು. ಈ ವೇಳೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಮಾಜಿ ಉಪಾಧ್ಯಕ್ಷ ಹಾಸೀಂ ಆಳಂದ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಹದ್ನೂರ, ಯುವ ಮುಖಂಡ ಮಹಮ್ಮದ್ ಪಟೇಲ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಿದ್ದು ಮಲ್ಲೇದ, ಶರಣಮ್ಮ ನಾಯಕ, ಅಂಬಿಕಾ ಪಾಟೀಲ ಸೇರಿದಂತೆ ಇತರರು ಭಾಗವಹಿಸಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST