ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ದೆಹಲಿ, ಉತ್ತರ ಬಂಗಾಳ, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಇದು ಮುಂದಿನ ಐದಾರು ದಿನಗಳ ಕಾಲ ನೈರುತ್ಯ ಮುಂಗಾರು ಇನ್ನಷ್ಟು ಜೋರಾಗಲಿದೆ ಎಂದು ತಿಳಿದು ಬಂದಿದೆ.
ಅರುಣಾಚಲ ಪ್ರದೇಶ ಭರ್ಜರಿ ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಯಾಗಿದೆ. ಮೂರು ಜನರು ಮೃತಪಟ್ಟಿದ್ದಾರೆ. ಮಂಗಾರು ತಡವಾದ ಪರಿಣಾಮ ಒಂದು ಕಡೆ ಸಂಕಷ್ಟ ಎದುರಾಗಿದೆ. ಮತ್ತೊಂದು ಕಡೆ ನೈರುತ್ಯ ಮುಂಗಾರಿನಿಂದಾಗಿ ಪ್ರವಾಹ ಸೃಷ್ಟಿಯಾಗಿದೆ. ಉತ್ತರ ಭಾರತದ ಹಲವು ರಾಜ್ಯಗಳು ಹಾಗೂ ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.



