ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಬಹುಭಾಷಾ ಹಿರಿಯ ನಟಿ ಸಾಹುಕಾರ್ ಜಾನಕಿ(94) ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 1.59ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರ ನಿಧನಕ್ಕೆ ತಮಿಳು, ತೆಲುಗು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
1952ರಲ್ಲಿ ವಲಾಯಪತಿ ಸಿನಿಮಾ ಮೂಲಕ ತಮಿಳು ಸಿನಿಮಾ ರಂಗ, ಸಾಹುಕಾರ್ ಚಿತ್ರದೊಂದಿಗೆ ತೆಲುಗು ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದರು. ಸಾಹುಕಾರ್ ಚಿತ್ರ ಜಾನಕಿ ಅವರಿಗೆ ಹೆಸರು ತಂದುಕೊಟ್ಟಿತು. ಹೀಗಾಗಿ ಅವರ ಹೆಸರಿನೊಂದಿಗೆ ಸಾಹುಕಾರ್ ಸೇರಿಕೊಂಡಿತು. ಕಳೆದ 70 ವರ್ಷಗಳಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.



