LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತರ ವಸಂತ್ ನಾಡಿಗೇರ ನಿಧನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಹಿರಿಯ ಪತ್ರಕರ್ತ(Journalist), ಸಂಯುಕ್ತ ಪತ್ರಿಕೆಯ ಸಂಪಾದಕ ವಸಂತ್ ನಾಡಿಗೇರ(59) ಅವರು ಸೋಮವಾರ ಮುಂಜಾನೆ ಹೃದಾಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಮೂರುವರೆ ದಶಕಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು. ತುಂಬಾ ವಿಶೇಷ ಹೆಡ್ಡಿಂಗ್ ಮೂಲಕವೇ ಜನಪ್ರಿಯತೆ ಗಳಿಸಿದವರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ಮೂಲದವರು. ಓದಿದ್ದು ಎಂಎಸ್ಸಿ ಆದರೂ ಬದುಕು ಕಟ್ಟಿಕೊಂಡಿದ್ದು ಪತ್ರಿಕೋದ್ಯಮದಲ್ಲಿ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮೂಲಕವೇ ವೃತ್ತಿ ಪ್ರಾರಂಭಿಸಿದ್ದರು. ಕನ್ನಡ ಪ್ರಭ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಯಲ್ಲಿಯೂ ಕೆಲಸ ಮಾಡಿದರು. ಕಳೆದ ಎರಡು ವರ್ಷಗಳ ಹಿಂದೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಜವಾಬ್ದಾರಿ ವಹಿಸಿಕೊಂಡಿದ್ದರು. ಇವರ ನಿಧನಕ್ಕೆ ನಾಡಿನ ಹಿರಿಯ, ಕಿರಿಯ ಪತ್ರಕರ್ತರು, ಸಹದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST