ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಒಂದು ಕಡೆ ಸದನದಲ್ಲಿಯೂ ವಿಪಕ್ಷಗಳು ಸಚಿವ ಬಿ.ನಾಗೇಂದ್ರ ರಾಜೀನಾಮಗೆ ಆಗ್ರಹಿಸಿ ಪಟ್ಟು ಹಿಡಿದಿವೆ. ಇನ್ನೊಂದು ಕಡೆ ಸದನದ ಹೊರಗೂ ವಿಪಕ್ಷಗಳು ಪ್ರತಿಭಟನೆ ನಡೆಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ಲೋಕಾಯುಕ್ತ ಕಚೇರಿಯಿಂದ ವಿಧಾನಸೌಧದ ತನಕ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ವಿರೋಧ ಪಕ್ಷಗಳ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



