ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಗುಮ್ಮಟನಗರಿ ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆಯಾಗಿದೆ. 25 ವರ್ಷದ ಅಲ್ತಾಪ್ ಮನಗೂಳಿ ಅನ್ನೋ ಯುವಕನನ್ನು ಬುಧವಾರ ಮುಂಜಾನೆ ನಗರದಲ್ಲಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ವಿಜಯಪುರ ನಗರದ ಮೀನಾಕ್ಷಿ ಚೌಕ್ ರಸ್ತೆಯಲ್ಲಿ ಈ ಕೃತ್ಯ ನಡೆದಿದೆ.
ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗಾಂಧಿ ಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಲಾಗುತ್ತಿದೆ. ಕೊಲೆಯಾದ ಅಲ್ತಾಫ್ ಮನಗೂಳಿ ವಿರುದ್ಧ ಕಳ್ಳತನ ಸೇರಿದಂತೆ ಇತರೆ ಪ್ರಕರಣಗಳಿವೆ ಎಂದು ಹೇಳಲಾಗುತ್ತಿದೆ. ಯಾರು ಕೊಲೆ ಮಾಡಿದ್ದು, ಕೊಲೆಗೆ ಏನು ಕಾರಣ ಅನ್ನೋದರ ತನಿಖೆಯನ್ನು ಪೊಲೀಸರು ನಡೆಸಿದ್ದಾರೆ.


