ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಸಿಜೆಪಿ ಪ್ರತಿಭಟನೆ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ಹಾಗೂ ರೈಲು ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಬಾರದು ಅನ್ನೋ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಗಿದೆ. ಈ ಸಂಬಂಧ ಶನಿವಾರ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
ಶೈಲೇಂದ್ರ ಮಣಿ ತ್ರಿಪಾಠಿ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ಇತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಸಿಜೆಪಿ ಪ್ರತಿಭಟನೆ ಹಿನ್ನಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿರುವುದು, ದೆಹಲಿಗೆ ಬರುವ ರೈಲುಗಳನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಅಕ್ಟೋಬರ್ 9ರಂದು ಸುಪ್ರೀಂ ಕೋರ್ಟ್ ಮೆಟ್ರೋ, ರೈಲುಗಳನ್ನು ಸಂಪೂರ್ಣವಾಗಿ ನಿಷೇಧಿಸಬಾರದು ಎಂದು ಆದೇಶ ನೀಡಿತ್ತು. ಆದರೆ, ಇದನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.


