LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾಖಲೆಯ ಶತಕ ಸಿಡಿಸಿದ ವಿರಾಟ್ ಕೊಹ್ಲಿ

ಪ್ರಜಾಸ್ತ್ರ ಸುದ್ದಿ(Photo: @BCCI)

ರಾಂಚಿ(Ranchi): ಟೀಂ ಇಂಡಿಯಾದ ಸ್ಫೋಟಕ ಸ್ಟಾರ್ ಬ್ಯಾಟ್ಸಮನ್ ವಿರಾಟ್ ಕೊಹ್ಲಿ ಸೌಥ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಏಕದಿನ ಪಂದ್ಯದಲ್ಲಿ 52 ಶತಕವನ್ನು ಪೂರೈಸಿದರು. ಅಲ್ಲದೆ ಅಂತಾರಾಷ್ಟ್ರೀಯ ಪುರುಷರ ಕ್ರಿಕೆಟ್ ನಲ್ಲಿ 7 ಸಾವಿರನೇ ಶತಕವಾಗಿದೆ.

ಟಾಸ್ ಗೆದ್ದ ಸೌಥ್ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ತಂಡ ಮೊದಲು ಬ್ಯಾಟ್ ಮಾಡಿತು. ಯುವ ಆಟಗಾರ ಯಶಸ್ವಿ ಜೈಸ್ವಾಲ್ 18 ರನ್ ಗೆ ಔಟ್ ಆದರು. ಅನುಭವಿ ಆಟಗಾರರಾದ ಕೊಹ್ಲಿ ಹಾಗೂ ರೋಹಿತ್ ಶರ್ಮಾ 136 ರನ್ ಗಳ ಜೊತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಹಾಕಿದರು. ಕೊಹ್ಲಿ 135, ರೋಹಿತ್ ಶರ್ಮಾ 57 ರನ್ ಗಳಿಸಿದರು. ನಾಯಕ ಕೆ.ಎಲ್ ರಾಹುಲ್ ಜೊತೆಗೆ ಕೊಹ್ಲಿ 76 ರನ್ ಗಳ ಜೊತೆಯಾಟವಾಡಿದರು. ಹೀಗಾಗಿ 8 ವಿಕೆಟ್ ನಷ್ಟಕ್ಕೆ ತಂಡದ ರನ್ 349 ಆಯಿತು.

ಇನ್ನು ಟೀಂ ಇಂಡಿಯಾದ ಮಾಜಿ ಆಟಗಾರ ಮಾಸ್ಟರ್ ಬ್ಲಾಸ್ಟರ್ ಸಚಿನ್ ತಂಡೂಲ್ಕರ್ ಟೆಸ್ಟ್, ಏಕದಿನ ಸೇರಿ 100 ಶತಕಗಳನ್ನು ಬಾರಿಸಿದ್ದಾರೆ. ಕೊಹ್ಲಿ 83 ಶತಕ ಸಿಡಿಸಿ 2ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ 71 ಶತಕ ಬಾರಿಸಿ 3ನೇ ಸ್ಥಾನದಲ್ಲಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST