ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಿದ್ಯುತ್ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಹೋರಾಟಗಳು ನಡೆಯುತ್ತಿವೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಟಾಟಾ ಕಂಪನಿಗೆ ವಿದ್ಯುತ್ ಪೂರೈಕೆಯ ಹೊಣೆಯನ್ನು ನೀಡುವ ವಿಚಾರದ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು. ನೌಕರರ ಬೇಡಿಕೆಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಖಾಸಗೀಕರಣದ ಕುರಿತು ನಾನೊಬ್ಬನೆ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಎಸ್ಕಾಂಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಸಂಪುಟದ ಸಚಿವರು ಖಾಸಗೀಕರಣ ಮಾಡಬಾರದೆಂದು ಹೇಳಿದ್ದಾರೆ. ಖಾಸಗೀಕರಣದ ಕುರಿತು ಬಿಜೆಪಿ ಸರ್ಕಾರ ತೀರ್ಮಾನ ಮಾಡಿತ್ತು. ಆಗ ವಿದ್ಯುತ್ ಇಲಾಖೆಯ ಅಧಿಕಾರಿಗಳು, ನೌಕರರು, ಸಂಘದವರು ವಿರೋಧ ವ್ಯಕ್ತಪಡಿಸಿರಲಿಲ್ಲ ಅನ್ನೋ ಮಾತನ್ನು ಸಹ ಹೇಳಿದರು.



