LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿ ಅಕ್ರಮ ಸಂಬಂಧ: ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಕುಣಿಗಲ್(Kunigal): ಪತ್ನಿ ಅಕ್ರಮ ಸಂಬಂಧ ಹೊಂದಿದ್ದು, ಇದರಿಂದ ಬೇಸತ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ಹುತ್ರಿದುರ್ಗ ಹೋಬಳಿಯ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಶನಿವಾರ ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ಶಿವಣ್ಣ(40) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮೊದಲ ಇಬ್ಬರು ಗಂಡು ಮಕ್ಕಳಾದ ಜೀವಂತ್(10) ಹಾಗೂ ಪ್ರಾಣೇಶ್(05) ಇವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ.

ಶಿವಣ್ಣನ ಪತ್ನಿ ಕಾವ್ಯ ಅಕ್ರಮ ಸಂಬಂಧ ಹೊಂದಿದ್ದಾಳೆ ಅನ್ನೋ ಕಾರಣಕ್ಕೆ ಇವರ ನಡುವೆ ಆಗಾಗ ಜಗಳವಾಗುತ್ತಿತ್ತು. ಇತ್ತೇಚೆಗೆ ಕಾವ್ಯ ಕುರುಡಿಹಳ್ಳಿಯಲ್ಲಿರುವ ತವರು ಮನೆಗೆ ಹೋಗಿದ್ದಾಳೆ. ಶಿವಣ್ಣ ತನ್ನ ಇಬ್ಬರು ಮಕ್ಕಳನ್ನು ಶುಕ್ರವಾರ ಸಂಜೆ ಮನೆಗೆ ಕರೆದುಕೊಂಡು ಬಂದಿದ್ದಾನೆ. ರಾತ್ರಿ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ. ಮುಂಜಾನೆ ನೆರೆಹೊರೆಯವರು ನೋಡಿದಾಗ ವಿಚಾರ ಬೆಳಕಿಗೆ ಬಂದಿದೆ. ಏನೂ ಅರಿಯದ ಮಕ್ಕಳು ಅನ್ಯಾಯವಾಗಿ ಪ್ರಾಣ ಕಳೆದುಕೊಂಡಿವೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST