LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಜಾರಕಿಹೊಳಿ ವಜಾ ಮಾಡುವ ಧೈರ್ಯ ತೋರಸ್ತೀರಾ: ಆರ್.ಅಶೋಕ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸುಳ್ಳಿನ ಟೈರ್ ಪಂಚರ್ ಮಾಡಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಕಾಂಗ್ರೆಸ್ ನಾಯಕರ ಬೂಟಾಟಿಕೆ ಬಯಲು ಮಾಡಿದೆ. ಈ ಹಿಂದೆ ಪಕ್ಷದ ನಿಲುವಿನ ವಿರುದ್ಧ ಮಾತನಾಡಿದ್ದಾರೆ ಎಂದು ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿದಂತೆ ಸಚಿವ ಜಾರಕಿಹೊಳಿ ಅವರನ್ನು ವಜಾ ಮಾಡುವ ಧೈರ್ಯ ತೋರಸ್ತೀರಾ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಸವಾಲು ಹಾಕಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಎಸ್ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ನಾಟಕೀಯ ಪ್ರಹಸನಕ್ಕೆ ಸ್ವತಃ ಅವರದ್ದೇ ಸಚಿವ ಸಂಪುಟದ ಸಚಿವ ಸತೀಶ ಜಾರಕಿಹೊಳಿ ಕನ್ನಡಿ ಹಿಡಿದಿದ್ದಾರೆ. ದೆಹಲಿಗೆ ಹೋಗಿ ಬೃಹತ್ ಪ್ರತಿಭಟನೆ ಹೆಸರಲ್ಲಿ ರಾಜ್ಯದ ಜನತೆಗೆ ಹಾಗೂ ದೇಶಕ್ಕೆ ಸುಳ್ಳು ಹರಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST