ಪ್ರಜಾಸ್ತ್ರ ಸುದ್ದಿ
ಯಾದಗಿರಿ(Yadagiri): ಜಿಲ್ಲೆಯ ಶಹಾಪುರ ತಾಲೂಕಿನ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ವೆಂಕಟರೆಡ್ಡಿ ಮಾಲಿಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣೇಶ ನಗರ ಬಡಾವಣೆಯಲ್ಲಿರುವ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಬ್ಯಾಂಕಿನಲ್ಲಿ ಸಾಲ ಮಂಜೂರಾತಿಯಲ್ಲಿ ಕೋಟ್ಯಾಂತರ ರೂಪಾಯಿ ದುರ್ಬಳಕೆಯಾಗಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಠೇವಣಿದಾರರು 10 ಕೋಟಿ ರೂಪಾಯಿ ವಾಪಸ್ ಕೊಡುವಂತೆ ಪ್ರತಿಭಟನೆ ನಡೆಸಿದ್ದರು. ಬ್ಯಾಂಕ್ ಸಿಬ್ಬಂದಿ ವಿರುದ್ಧ ದೂರು ಸಹ ದಾಖಲಿಸಲಾಗಿದೆ. ಇದೆಲ್ಲದರ ನಡುವೆ ಬ್ಯಾಂಕಿನ ಅಧ್ಯಕ್ಷರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.



