ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಹೀಲಿಯಂ ಬಲೂನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೃತಪಟ್ಟಿದ್ದು, ಇದೀಗ ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಗುರುವಾರ ರಾತ್ರಿ ಸುಮಾರು 8.30ರ ಹತ್ತಿರ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದೆ.
ಈ ವೇಳೆ ಗಾಯಗೊಂಡಿದ್ದ ಲಕ್ಷ್ಮಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಈಕೆ ಅಣ್ಣ ಸಹ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ ಉತ್ತರ ಪ್ರದೇಶ ಮೂಲದ ಸಲೀಂ ಸಹ ಮೃತಪಟ್ಟಿದ್ದಾನೆ. ಕನೋಜ್ ಜಿಲ್ಲೆಯ ತೊಫಿಯಾ ಗ್ರಾಮದ ನಿವಾಸಿಯಾಗಿದ್ದು, ಅಲ್ಲಿ 5 ಎಕರೆ ಜಮೀನು ಇದೆ. ಹೀಗಿದ್ದರೂ ಬಲೂನ್ ಮಾರಲು ಮೈಸೂರಿಗೆ ಬಂದಿದ್ದು ಯಾಕೆ ಅನ್ನೋ ಪ್ರಶ್ನೆ ಮೂಡಿದೆ. ಹೀಗಾಗಿ ಇದರ ತನಿಖೆಯನ್ನು ಎನ್ಐಎಗೆ ನೀಡಲಾಗಿದೆ.




