ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ನಿತಿನ್ ನಬಿನ್ ಅಧಿಕಾರ ವಹಿಸಿಕೊಂಡರು. ಜೆ.ಪಿ ನಡ್ಡಾ ಅಧಿಕಾರಾವಧಿ ಮುಗಿದ ಬಳಿಕ ನಡೆದ ಪಕ್ಷದ ಚುನಾವಣೆಯಲ್ಲಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಹೊರತಾಗಿ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಬಿಜೆಪಿ ಮಂಗಳವಾರ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೆಂದು ಅಧಿಕೃತವಾಗಿ ಘೋಷಿಸಿತು. 46 ವರ್ಷದ ನಿಬಿನ್ ಬಿಹಾರ ಮೂಲದವರಾಗಿದ್ದಾರೆ. ಐದು ಬಾರಿ ಶಾಸಕರಾಗಿದ್ದಾರೆ. ಅತ್ಯಂತ ಕಿರಿಯ ವಯಸ್ಸಿನ ಇವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಇವರ ನಾಮಪತ್ರಕ್ಕೆ ಪ್ರಧಾನಿ ಮೋದಿ, ಹಿರಿಯ ಮುಖಂಡರು ಅನುಮೋದಿಸಿ ಬೆಂಬಲಿಸಿದ್ದರು.




