ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2024-25ನೇ ಸಾಲಿನ ಬಜೆಟ್(Budget) ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಕೇಂದ್ರದಲ್ಲಿ ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್(JDU) ಹಾಗೂ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು(TDP) ಅವರಿಗೆ ವಿಶೇಷ ಪ್ಯಾಕೇಜ್ ನೀಡಲಾಗಿದೆ.
ಆಂಧ್ರ ಮರುನಿರ್ಮಾಣಕ್ಕೆ 50 ಸಾವಿರ ಕೋಟಿ ಘೋಷಣೆ ಮಾಡಲಾಗಿದೆ. ಬಿಹಾರದ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 26 ಸಾವಿರ ಕೋಟಿ ಘೋಷಿಸಲಾಗಿದೆ. ವಿಶೇಷ ವಿಮಾನ ನಿಲ್ದಾಣಕ್ಕೆ ಅನುದಾನ ಕೊಡಲಾಗಿದೆ. ಆಂಧ್ರದಲ್ಲಿ ವಿಶೇಷ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ.
ಪೂರ್ಪೋದಯ ಯೋಜನೆ ಮೂಲಕ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಜಾರ್ಖಾಂಡ್ ಹಾಗೂ ಆಂಧ್ರವನ್ನು ಕೂಡಿಕೊಂಡು ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ.