ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರಗೆ ನೋಟಿಸ್ ನೀಡಲಾಗಿದೆ. 74 ಗಂಟೆಯಲ್ಲಿ ಉತ್ತಿರುಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಶಾಸಕ ಎಸ್.ಟಿ ಸೋಮಶೇಖರ್, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆಯಲ್ಲ. 2028ರ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸಬೇಕು ಅನ್ನೋದು ಕಾರ್ಯಕರ್ತರ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಕಾಂಗ್ರೆಸ್ ಸೇರುವ ಉದ್ದೇಶವಿಲ್ಲ. ಅವರಿಗೆ ಸ್ಪಷ್ಟ ಬಹುಮತವಿದೆ. ನನ್ನ ಅವಶ್ಯಕತೆಯಿಲ್ಲ. ಪಕ್ಷದ ಯಾವುದೇ ಚಟುವಟಿಕೆಗಳಿಗೆ ನನ್ನನ್ನು ಆಹ್ವಾನಿಸುತ್ತಿಲ್ಲ. ಲೋಕಸಭೆ, ಪರಿಷತ್ ಚುನಾವಣೆಯಲ್ಲೂ ಕರೆದಿಲ್ಲ. ಶಾಸಕಾಂಗ ಸಭೆಗೂ ಕರೆದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.