ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇತ್ತೀಚೆಗೆ ನಡೆದ 40 ಕೆಎಎಸ್(KAS) ಹುದ್ದೆಗಳು ಸೇರಿದಂತೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಿದ ಪ್ರಶ್ನೆಗಳು ಅಸಮರ್ಪಕವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಯ್ತು. ಈ ಸಂಬಂಧ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೆಪಿಎಸ್ ಸಿ(KPSC) ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ(Kannada) ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳ ಒಳಗಾಗಿ ಮರು ಪರೀಕ್ಷೆ ಮಾಡುವಂತೆ ಕೆಪಿಎಸ್ ಸಿಗೆ ಸೂಚನೆ ನೀಡಿದ್ದೇನೆ. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಾವು ಪರಿಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.