ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜಾಲಿವುಡ್ ಪಾರ್ಕ್ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದಿರಲಿಲ್ಲ. ಮಾಲಿನ್ಯ ನಿಯಂತ್ರಣ ಕಾಯ್ದೆಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಉಲ್ಲಂಘಟನೆ ಮಾಡಲಾಗಿದೆ ಎಂದು ಮಂಗಳವಾರ ಸಂಜೆ ಜಾಲಿವುಡ್ ಪಾರ್ಕ್ ಗೆ ತಹಶೀಲ್ದಾರ್ ನೇತೃತ್ವದಲ್ಲಿ ಬೀಗ ಹಾಕಲಾಗಿದೆ. ಹೀಗಾಗಿ ಇಲ್ಲಿ ನಡೆಸುತ್ತಿದ್ದ ಕನ್ನಡದ ಬಿಗ್ ಬಾಸ್ 12ನೇ ಆವೃತ್ತಿಗೂ ಸಂಕಷ್ಟ ಎದುರಾಗಿದ್ದು, ಸ್ಪರ್ಧಿಗಳನ್ನು ಹೊರ ಕಳಿಸಲಾಗಿದೆ. ಆಯೋಜಕರು ಅವರನ್ನು ಈಗಲ್ಟನ್ ರೆಸಾರ್ಟ್ ಗೆ ಸ್ಥಳಾಂತರಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೋಟಿಸ್ ಕೊಟ್ಟಿದ್ದರೂ ನಿಯಮಗಳನ್ನು ಪಾಲನೆ ಮಾಡಿಲ್ಲವೆಂದು ತಹಶೀಲ್ದಾರ್ ತೇಜಸ್ವಿನಿ ಅವರು ತಿಳಿಸಿದ್ದಾರೆ. ಹೀಗಾಗಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬೀಗ ಹಾಕಿದ್ದಾರೆ. ಜಿಲ್ಲಾಡಳಿತದ ಪರವಾಗಿ ನೋಟಿಸ್ ನೀಡಲು ಹೋದಾಗ ಜಾಲಿವುಡ್ ನ ಸಿಬ್ಬಂದಿ ಉದ್ಧಟತನ ತೋರಿಸಿದ್ದಾರೆ. ಈಗ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.