ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ನರ್ಸ್ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಈ ಬಗ್ಗೆ ತಿಳಿಸಿದ್ದಾರೆ. ಶಾಸಕ ಯು.ಬಿ ಬಣಕಾರ, ಸಚಿವ ಶಿವಾನಂದ ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ಪರಿಹಾರ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಲಾಗಿದೆ. ಸ್ವಾತಿ ಪ್ರೇಮಿ ನಯಾಜ್ ಹಾಗೂ ಆತನ ಸ್ನೇಹಿತರಿಂದ ಕೊಲೆ ನಡೆದಿದ್ದು, ನಂತರ ಮೃತದೇಹವನ್ನು ನದಿಗೆ ಎಸೆಯಲಾಗಿತ್ತು ಎಂದು ತಿಳಿದು ಬಂದಿದೆ. ಘಟನೆ ಖಂಡಿಸಿ ಪ್ರತಿಭಟನೆ ಸಹ ನಡೆದಿವೆ. ರಾಣೆಬೆನ್ನೂರು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಮಾರ್ಚ್ 2ರಂದು ಕೆಲಸಕ್ಕೆ ಹೋದವಳು ವಾಪಸ್ ಬಂದಿರಲಿಲ್ಲ. ಮಾರ್ಚ್ 6ರಂದು ಫತ್ತಾಪುರ ಹತ್ತಿರದ ತುಂಗಭದ್ರಾ ನದಿ ದಡದಲ್ಲಿ ಶವ ಪತ್ತೆಯಾಗಿತ್ತು.