ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಒತ್ತಡದ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು. ಸೋಮವಾರ ನಗರದ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಕರ್ತವ್ಯಬದ್ಧತೆಯಿಂದ ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದರು. ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಪ್ರಭಾರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ, ದೇಶಕ್ಕಾಗಿ ಹೋರಾಡುತ್ತಾ ವೀರ ಮರಣಹೊಂದಿದ್ದ ಪೊಲೀಸರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್ನ ಬಾಸಿ ಚೀನಾ ಭಾಗದಲ್ಲಿ ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರರಾದ ಪೊಲೀಸರುಗಳನ್ನು ದೇಶದದ್ಯಂತ ಎಲ್ಲ ಘಟಕಗಳಲ್ಲಿ ಸ್ಮರಿಸಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಉಪಸ್ಥಿತರಿದ್ದರು.