ಪ್ರಜಾಸ್ತ್ರ ಸುದ್ದಿ
ಶ್ರೀನಗರ(Srinagara): ಕಣಿವೆ ನಾಡು ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಮೇಲೆ ನಡೆದ ಮೊದಲ ಚುನಾವಣೆಯಲ್ಲಿ ಎನ್ಸಿ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಆಡಳಿತ ರಚನೆಯಾಗಿದೆ. ಶೇರ್-ಎ ಕಾಶ್ಮೀರ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಓಮರ್ ಅಬ್ದುಲ್ ಅವರಿಗೆ ಪ್ರಮಾಣ(Oath) ವಚನ ಬೋಧಿಸಿದರು.
2009ರಿಂದ 14ರಲ್ಲಿಯೂ ಕಾಂಗ್ರೆಸ್ ಹಾಗೂ ಎನ್ಸಿ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. 370ನೇ ವಿಧಿ ರದ್ದುಪಡಿಸಿದ ಬಳಿಕ 2019ರಲ್ಲಿ ಜಮ್ಮು-ಕಾಶ್ಮೀರ, ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಣೆಯಾದ ಮೇಲೆ ನಡೆದ ಮೊದಲ ಚುನಾವಣೆ ಇದಾಗಿದೆ. ಬಿಜೆಪಿ ವಿಪಕ್ಷ ಸ್ಥಾನದಲ್ಲಿದೆ. 2ನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಓಮರ್ ಅಬ್ದುಲ್ ಎದುರು ಹಲವು ಹೊಸ ಸವಾಲುಗಳಿವೆ.