Ad imageAd image

ನ.21ರಂದು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಹಾಡು ಬಿಡುಗಡೆ

ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಕಲ್‌ ವಿಡಿಯೋ ಹಾಡು ನವೆಂಬರ್ 21ರಂದು ಬಿಡುಗಡೆ ಆಗಲಿದೆ.

Nagesh Talawar
ನ.21ರಂದು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಹಾಡು ಬಿಡುಗಡೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಹೊರ್ತಿ(Horti): ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಕಲ್‌ ವಿಡಿಯೋ ಹಾಡು ನವೆಂಬರ್ 21ರಂದು ಬಿಡುಗಡೆ ಆಗಲಿದೆ. ಈ ಕುರಿತು ಶ್ರೀಕ್ಷೇತ್ರ ಇಂಚಗೇರಿ ಮಠದ ಶ್ರೀ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಶ್ರೀ ಸದ್ಗುರು ಸಂಗಮೇಶ್ವರ ಮಹಾರಾಜರ 93ನೇ ಪುಣ್ಯಸ್ಮರಣೆಯಂದು ಹಾಡು ಬಿಡುಗಡೆಯಾಗಲಿದೆ. ಇದೇ ವೇಳೆ ಇಂಚಗೇರಿ ಆಧ್ಯಾತ್ಮ ಸಂಪ್ರದಾಯ ಹಾಗೂ ಚಲನಚಿತ್ರದ ಕುರಿತು ಅನೇಕ ವಿಷಯಗಳನ್ನು ಇಂಚಗೇರಿ ಮಠದಲ್ಲಿ ಸಿನಿಮಾ ತಂಡದವರ ಜೊತೆ ಮಹಾರಾಜರು ಚರ್ಚಿಸಿದರು.

ಚುಟು ಚುಟು ಹಾಡಿನ ಮೂಲಕ ಗಮನ ಸೆಳೆದ, ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ ಅವರು “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಶ್ರೀ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು ಪ್ರಶಂಸಿಸಿದರು. ಈ ವೇಳೆ ಚಿತ್ರ ನಿರ್ಮಾಪಕ ಮಾಧವಾನಂದ ವೈ, ಶ್ರೀಶೈಲ ಗಾಣಿಗೇರ, ನಟ ವಿಶ್ವಪ್ರಕಾಶ ಟಿ ಮಲಗೊಂಡ, ಪ್ರಕಾಶ ಕಾಲತಿಪ್ಪಿ, ಮಲ್ಲಿಕಾರ್ಜುನ ಕಾಲತಿಪ್ಪಿ ಉಪಸ್ಥಿತರಿದ್ದರು.

ಹೊಸ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ವಿಶ್ವಪ್ರಕಾಶ ಟಿ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ ನಿರ್ದೇಶನ, ಸಿ.ನಾರಾಯಣ್ ಛಾಯಾಗ್ರಹಣ, ಎ.ಟಿ.ರವೀಶ್ ಸಂಗೀತ, ಡಿ.ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

WhatsApp Group Join Now
Telegram Group Join Now
Share This Article