Ad imageAd image

ಉಪ ಲೋಕಾಯುಕ್ತರಿಂದ 2ನೇ ದಿನ ಸಾರ್ವಜನಿಕರ ಅಹವಾಲು ವಿಚಾರಣೆ

ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ  ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ

Nagesh Talawar
ಉಪ ಲೋಕಾಯುಕ್ತರಿಂದ 2ನೇ ದಿನ ಸಾರ್ವಜನಿಕರ ಅಹವಾಲು ವಿಚಾರಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಎರಡನೇ ದಿನ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಸಾರ್ವಜನಿಕರಿಂದ(Public) ಹಲವು ಅರ್ಜಿಗಳನ್ನು ಸ್ವೀಕರಿಸಲಾಯಿತು. ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ ಅವರು ಮಾತನಾಡಿ, ಎಲ್ಲಾ ಅರ್ಜಿದಾರರ ದೂರನ್ನು  ಆಲಿಸಲಾಗುವುದು. ಸಲ್ಲಿಕೆಯಾಗುವ ದೂರು, ಅಹವಾಲುಗಳನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ(DC) ಟಿ. ಭೂಬಾಲನ್ ಅವರು ಮಾತನಾಡಿ, ಸಾರ್ವಜನಿಕ ಆಡಳಿತವನ್ನು ಉತ್ತಮಗೊಳಿಸುವಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮಾದರಿಯಾಗಿದೆ. ಸಾರ್ವಜನಿಕರ ಸಮಸ್ಯೆಗೆ ಪ್ರತಿಯಾಗಿ ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವಹಿಸಿ, ತಮ್ಮ ಹಂತದಲ್ಲಿಯೇ ಸಲ್ಲಿಕೆಯಾಗುವ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ತಪ್ಪಿದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ, ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ(CEO) ರಿಷಿ ಆನಂದ ಮಾತನಾಡಿ, ಅತ್ಯಂತ ಜವಾಬ್ದಾರಿಯಿಂದ   ಜನಹಿತಕ್ಕಾಗಿ, ಜನ ಕಲ್ಯಾಣಕ್ಕಾಗಿ ತಮಗೆ ಸಿಕ್ಕಿರುವ ಅವಕಾಶ ಬಳಸಿಕೊಂಡು ಸಮರ್ಥವಾಗಿ ಕಾರ್ಯ ನಿರ್ವಹಿಸಿ, ಗ್ರಾಮೀಣ ಕ್ಷೇತ್ರದಲ್ಲಿ ಸಮಸ್ಯೆಗಳ ಅರಿತು ಕಾರ್ಯನಿರ್ವಹಿಸಿ ಶಿಕ್ಷಣ, ಕುಡಿಯುವ ನೀರು, ಸ್ವಚ್ಚತೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆಯನ್ನಾಗಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(SP) ಋಷಿಕೇಷ ಸೋನಾವಣೆ, ವಿಚಾರಣೆ ಶಾಖೆಯ ಉಪ ನಿಬಂಧಕರಾದ ಪ್ರಕಾಶ ಎಲ್.ನಾಡಿಗೇರ, ಲೋಕಾಯುಕ್ತದ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕರಾದ ಶುಭವೀರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್.ಹಾಗರಗಿ ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ, ವಿಜಯಪುರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ್, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article