ಹಸ್ತದೊಳಗೆ ಹಸ್ತದ ಆಪರೇಷನ್: ಕಟೀಲ್

128

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೆ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟಗಳು ಹೆಚ್ಚಾಗಿವೆ. ಅಲ್ಲಿ ಮೂರು ಬಣವಾಗಿ ಇಬ್ಭಾಗವಾಗುತ್ತೆ. ಕಾಂಗ್ರೆಸ್ ನಿಂದ 30-40 ಜನ ಶಾಸಕರು ಹೊರಗೆ ಬರಲಿದ್ದಾರೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ಬಣವಾಗಿವೆ. ಇದರ ನಡುವೆ ಮರಿ ಖರ್ಗೆ ಮುಖ್ಯಮಂತ್ರಿ ಹುದ್ದೆ ಬೇಡಿಕೆ ಇಡುತ್ತಿದ್ದಾರೆ. ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತದೆ ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
error: Content is protected !!