ಪ್ರಜಾಸ್ತ್ರ ಸುದ್ದಿ
ಶ್ರೀನಗರ(Srinagara): ಭಾರತೀಯ ಸೇನಾ ಪಡೆಯಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕೆ ಆಪರೇಷನ್ ಸಿಂಧೂರ ಎಂದು ಹೆಸರು ಇಡಲಾಗಿದೆ. ಉಗ್ರರ 9 ಶಿಬಿರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಶುರು ಮಾಡಲಾಗಿದೆ. ಹೀಗಾಗಿ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನತೆ ಹೆಚ್ಚಾಗಿದೆ.
ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಇದೀಗ ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಈ ವೇಳೆ ಹಲವು ಉಗ್ರರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೃತಸರ, ಚಂಢೀಗಡ, ಧರ್ಮಶಾಲಾ, ಲೇಹ್ ನ ವಿಮಾನ ನಿಲ್ದಾಣಗಳಲ್ಲಿ ಸಂಚಾರ ನಿಲ್ಲಿಸಲಾಗಿದೆ.
ಜಮ್ಮು, ಕಥುವಾ, ಸಾಂಬಾ, ಪೂಂಚ್, ರಜೌರಿ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗಾಗ್ಲೇ 10ಕ್ಕೂ ಹೆಚ್ಚು ಬಾರಿ ಪ್ರಚೋದಿತ ದಾಳಿ ನಡೆಸಿದ ಪಾಕ್ ಗೆ ತಕ್ಕ ಉತ್ತರ ನೀಡಲಾಗಿದೆ. ಈಗ ಆಪರೇಷನ್ ಸಿಂಧೂರ ಮೂಲಕ ಸರಿಯಾಗಿ ಬಿಸಿ ಮುಟ್ಟಿಸುವ ಕೆಲಸವನ್ನು ಭಾರತೀಯ ಸೇನೆ ಪಡೆ ನಡೆಸಿದೆ.