ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಹೀಗಾಗಿ ಇದರ ಸಂಭ್ರಮ ಹಾಗೂ ಯೋಧರಿಗೆ ಗೌರವ ಸಲ್ಲಿಸಲುವ ಸಲುವಾಗಿ ಕಾಂಗ್ರೆಸ್ ವತಿಯಿಂದ ಶುಕ್ರವಾರ ತಿರಂಗಯಾತ್ರೆ ನಡೆಸಲಾಗಿದೆ. ಕೆ.ಆರ್ ವೃತ್ತದಿಂದ ವಿಧಾನಸೌಧ ಮುಂಭಾಗದಲ್ಲಿ ಗಾಂಧಿ ಪ್ರತಿಮೆವರೆಗೂ ಮೆರವಣಿಗೆ ನಡೆಸುವ ಮೂಲಕ ಭಾರತ ಹಾಗೂ ಯೋಧರ ಪರ ಘೋಷಣೆಗಳನ್ನು ಕೂಗಿ ಬೆಂಬಲ ಸೂಚಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು, ಶಾಸಕರು, ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸೇರಿದ ಜನವರು ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಲಾಗಿದೆ. ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 23 ಅಮಾಯಕ ಭಾರತೀಯರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ.