ಪ್ರಜಾಸ್ತ್ರ ಸುದ್ದಿ
ನೆಲಮಂಗಲ(Nelamangala): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಆಪರೇಷನ್ ಸಿಂಧೂರ ನಡೆಸಿದೆ. ಇದು ಯಶಸ್ವಿಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ವತಿಯಿಂದ ಶುಕ್ರವಾರ ತಿರಂಗಯಾತ್ರೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮುಂಜಾನೆ 9.30ಕ್ಕೆ ಕೆ.ಆರ್ ವೃತ್ತದಿಂದ ಎಂ.ಜಿ ರಸ್ತೆಯಲ್ಲಿನ ಗಾಂಧಿ ವೃತ್ತದ ತನಕ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಸರ್ಕಾರಿ, ಖಾಸಗಿ ಸಂಘಟನೆಗಳು ಭಾಗವಹಿಸಬಹುದು. ಅಧಿಕಾರಿಗಳು, ರಾಜಕೀಯ ಮುಖಂಡರು, ಸಿನಿಮಾದವರು ಸಹ ಭಾಗವಹಿಸಬಹುದು. ಈ ವೇಳೆ ಬೃಹತ್ ತ್ರಿವರ್ಣ ಧ್ವಜ ಹಿಡಿದು ಹೆಜ್ಜೆ ಹಾಕಲಾಗುವುದು. ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು ಸೈನಿಕರಿಗೆ ಗೌರವ ಸಲ್ಲಿಸಲಾಗುವುದು. ಇದಕ್ಕೆ ಸಿಎಂ ಸಿದ್ದರಾಮಯ್ಯ, ಸಂಪುಟ ಸಚಿವರಿಗೂ ಆಹ್ವಾನ ನೀಡಲಾಗುವುದು ಎಂದು ಹೇಳಿದ್ದಾರೆ.