ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರಧಾನಿ, ಮುಖ್ಯಮಂತ್ರಿ, ಸಚಿವರ ಪದಚ್ಯುತಿಗೆ ಅವಕಾಶ ಕಲ್ಪಿಸುವ ಸಂವಿಧಾನ ಮೂಸದೆ(130ನೇ ತಿದ್ದುಪಡಿ) 2025 ಅನ್ನು ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಮಂಡಿಸುವ ವೇಳೆ ಪ್ರತಿಭಟನೆ ನಡೆಸಲಾಗಿದೆ. ವಿಪಕ್ಷಗಳ ನಾಯಕರ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಮಸೂದೆ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಮಸೂದೆ ಜಾರಿಗೆ ಮುಂದಾಗಿದೆ ಎಂದು ಕಿಡಿ ಕಾರಿದರು. ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್, ಮನೀಷ್ ತಿವಾರಿ, ರೆವಲ್ಯೂಷನರಿ ಸೋಶಿಯಲಿಸ್ಟ್ ಪಕ್ಷದ ಎನ್.ಕೆ ಪ್ರೇಮಚಂದ್ರನ್, ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಮಸೂದೆ ಹರಿದು ಹಾಕಿ ಪ್ರತಿಭಟಿಸಿದರು.
ಗಂಭೀರ ಪ್ರಕರಣಗಳಲ್ಲಿ 30 ದಿನಗಳವರೆಗೆ ಬಂಧನಕ್ಕೆ ಒಳಗಾಗುವ ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು 31ನೇ ದಿನಕ್ಕೆ ಅವರನ್ನು ಪದವಿಯಿಂದ ಪದಚ್ಯುತಿಗೊಳಿಸುವ ಮಸೂದೆ ಇದಾಗಿದೆ. ಬಿಡುಗಡೆಯಾಗಿ ಬಂದ ಮೇಲೆ ಮತ್ತೆ ಅಧಿಕಾರ ವಹಿಸಿಕೊಳ್ಳಬಹುದಾಗಿದೆ.