ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉದ್ಯಮಿ ಗೌತಮ್ ಅದಾನಿ ವಿರುದ್ಧ ಕೇಳಿ ಬಂದಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಿಪಕ್ಷಗಳು ಸಂಸತ್ ಎದುರು ಪ್ರತಿಭಟನೆ ನಡೆಸಿವೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿವೆ. ಮೋದಿ ಅದಾನಿ ಏಕ್ ಹೈ, ಅದಾನಿ ಸೇಫ್ ಹೈ ಎನ್ನುವ ಬರಹದ ಟೀ ಶರ್ಟ್ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಉದ್ಯಮಿ ಅದಾನಿ ವಿರುದ್ಧ ಪ್ರತಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಅದಾನಿ ವಿರುದ್ಧ ಪ್ರಧಾನಿ ಮೋದಿ ತನಿಖೆಗೆ ಆದೇಶಿಸುವುದಿಲ್ಲ. ಯಾಕಂದರೆ ಅವರೇ ತನಿಖೆ ಎದುರಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ವಯನಾಡು ನೂತನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ವಿಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.