ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜಾತಿಗಣತಿ ವಿರೋಧಿಸಿ ರಾಜ್ಯದ ತುಂಬಾ ಪ್ರತಿಭಟನೆ ನಡೆಸಲು ರಾಜ್ಯ ಒಕ್ಕಲಿಗರ ಸಂಘ ನಿರ್ಧರಿಸಿದೆ. ಏಪ್ರಿಲ್ 17ರಂದು ನಡೆಯುವ ವಿಶೇಷ ಸಚಿವ ಸಂಪುಟದ ಬಳಿಕ ಹೋರಾಟದ ರೂಪ ರೇಷಗಳ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿದು ಬಂದಿದೆ. ಲಿಂಗಾಯತ, ಬ್ರಾಹ್ಮಣ ಸೇರಿ ಎಲ್ಲರನ್ನೂ ಒಟ್ಟುಗೂಡಿಸಿ ರಾಜ್ಯ ಬಂದ್ ಮಾಡುವ ರೀತಿಯಲ್ಲಿ ಹೋರಾಟ ಮಾಡಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೊಂದು ಅವೈಜ್ಞಾನಿಕ ವರದಿಯಾಗಿದೆ. ನಮ್ಮ ಜನಾಂಗಕ್ಕೆ ಅನ್ಯಾಯವಾದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ನಮ್ಮ ನಿರ್ದೇಶಕ ಸ್ಥಾನಕ್ಕೆ ಎಲ್ಲರೂ ರಾಜೀನಾಮೆ ಸಲ್ಲಿಸುತ್ತೇವೆ. ಸರ್ಕಾರ ಬೀಳಿಸುವ ತಾಕತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.