ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಮೂಹಿಕವಾಗಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಮಾಜ್ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ.
ಟರ್ಮಿನಲ್-2ರಲ್ಲಿ ಸರ್ವಧರ್ಮ ಪ್ರಾರ್ಥನಾ ಮಂದಿರವಿದೆ. ಭದ್ರತಾ ತಪಾಸಣೆ ಬಳಿಕ ಅಲ್ಲಿ ಪ್ರಾರ್ಥನೆ ಮಾಡಬಹುದು. ಆದರೆ, ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿರುವುದು ಎಷ್ಟು ಸರಿ ಅನ್ನೋ ಪ್ರಶ್ನೆ ಎದ್ದಿದೆ. ಇನ್ನು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿಬಿಟಿ ಸಚಿವ ಪ್ರಯಾಂಕ್ ಖರ್ಗೆ ಇದಕ್ಕೆ ಅನುಮತಿ ನೀಡಿದರೇ ಎಂದು ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ.




