ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜಧಾನಿಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ಎಲ್ಲಿ ನೋಡಿದರೂ ನೀರು ತುಂಬಿಕೊಳ್ಳುತ್ತಿದೆ. ಸ್ಲಂ ಏರಿಯಾಗಳಿಂದ ಹಿಡಿದು ಐಷಾರಾಮಿ ಏರಿಯಾಗಳ ತನಕ ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ಬುಧವಾರವೂ ಮಳೆ ಮುಂದುವರೆದಿದೆ. ಹೀಗಾಗಿ ಇಂದು ಹಾಗೂ ನಾಳೆ ಎರಡು ದಿನ ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ. 300 ಎಕರೆ ವಿಸ್ತೀರ್ಣ ಟೆಕ್ ಪಾರ್ಕ್ ನಲ್ಲಿ ಮನೆಗಳು ಜಲಾವೃತಗೊಂಡಿವೆ.
ಮುಂಜಾನೆಯಿಂದ ಕೆಲಸಕ್ಕೆ ಹೋಗುವವರು ರಸ್ತೆಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಪ್ರಮುಖ ರಸ್ತೆಗಳು ಟ್ರಾಫಿಕ್ ನಿಂದಾಗಿ ಮಳೆಯ ನೀಡುವ ಗಂಟೆಗಟ್ಟಲೇ ನಿಂತುಕೊಳ್ಳಬೇಕಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತ ಕ್ರಮ ವಹಿಸಿ ಎಂದು ಎಚ್ಚರಿಕೆ ನೀಡಲಾಗಿದೆ. ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವತ್ತ ಗಮನ ಹರಿಸಿ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಪಶ್ಚಿಮ ಬಂಗಳಾ ವಾಯುಭಾರ ಕುಸಿತು ಕರ್ನಾಟಕದ ಮೇಲೆ ಭಾರೀ ಪರಿಣಾಮ ಬೀರಿದೆ.