ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ದಿನದಿಂದ ದಿನಕ್ಕೆ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ರಾಜ್ಯದ 21 ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಬಹುತೇಕ ಜಿಲ್ಲೆಗಳಲ್ಲಿ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಿದ್ದರೆ, ಬೀದರ ಜಿಲ್ಲೆಯಲ್ಲಿ 7 ಡಿಗ್ರಿ ಸೆಲ್ಸಿಯಸ್ ಇದ್ದು, ಮೈ ಕೊರೆಯುವ ಚಳಿಯಿಂದ ಜನರು ಕಂಗಾಲಾಗಿದ್ದಾರೆ.
ಉತ್ತರ ಒಳನಾಡಿ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ತೀವ್ರ ಶೀತಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೀದರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲಿ ಚಿಕ್ಕಮಕ್ಕಳು, ವಯಸ್ಸಾದವರು, ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಜಾಗ್ರತೆಯಿಂದ ಇರಬೇಕಾಗಿದೆ.




