ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಭ ಕೋರಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ ಕೈ ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಅನ್ನೋದು ಚರ್ಚೆಯಲ್ಲಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಬೇಕು ಅನ್ನೋ ಮಾತುಕತೆಯಾಗಿದೆ ಎನ್ನಲಾಗುತ್ತಿದೆ. ಆದರೆ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದರೂ, ಸಿಎಂ ಬದಲಾವಣೆ ಚರ್ಚೆ ಮಾತ್ರ ಜೋರಾಗಿ ನಡೆಯುತ್ತಲೇ ಇದೆ. ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಡುತ್ತಿಲ್ಲ. ಹೀಗಾಗಿ ಈ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.