ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್(Congress) ಕಾರ್ಯಕರ್ತರ ಆಕ್ರೋಶ ಭುಗಿಲೇಳುತ್ತಿದೆ. ಕೈ ನಾಯಕರು ಸಹ ಕಿಡಿ ಕಾರುತ್ತಿದ್ದು, ಇದೀಗ ಹಿಂಸಾರೂಪ ಪಡೆದುಕೊಳ್ಳುವ ಎಲ್ಲ ಸಾಧ್ಯತೆಗಳು ಕಂಡು ಬರುತ್ತಿದೆ. ಸೋಮವಾರ ಬಿಜೆಪಿ ಮುಖಂಡರೊಬ್ಬರಿಗೆ ಸೇರಿದ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳೂರಿನ ಲಾಲ್ಬಾಗ್ ನಲ್ಲಿ ನಡೆದಿದೆ. ಬಸ್ಸಿನಲ್ಲಿದ್ದ ಓರ್ವ ಮಹಿಳೆಗೆ ಗಾಯವಾಗಿದೆ.
ನೌಫಾಲ್ ಎನ್ನುವ ಬಿಜೆಪಿ ನಾಯಕರೊಬ್ಬರಿಗೆ ಸೇರಿದ ಸಿಟಿ ಬಸ್ ಇದಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ(Protest) ನಡೆಸುತ್ತಿದ್ದು ವೇಳೆ, ಕೆಲ ಕಿಡಿಗೇಡಿಗಳು ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಚಾಲಕನ ಹಿಂದಿನ ಸೀಟಿನಲ್ಲಿ ಕುಳಿತದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ. ಪ್ರಯಾಣಿಕರನ್ನು ಮತ್ತೊಂದು ಬಸ್ಸಿನಲ್ಲಿ ಕಳಿಸಿಕೊಡಲಾಗಿದೆ.