ಪ್ರಜಾಸ್ತ್ರ ಸುದ್ದಿ
ಸಂಭಲ್(Sambhal): ಉತ್ತರ ಪ್ರದೇಶದ ಸಂಭಲ್ ನಲ್ಲಿ ಶಾಹಿ ಜಾಮಾ ಮಸೀದಿಯ(Shahi Jama Masjid)ಸರ್ವೇ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದುಕೊಂಡಿದೆ. ಈ ಘಟನೆಯಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನವೆಂಬರ್ 30ರ ತನಕ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಜೊತೆಗೆ ಹೊರಗಿನಿಂದ ಬರುವ ಜನರಿಗೆ ನಿರ್ಬಂಧ ವಿಧಿಸಲಾಗಿದೆ.
ಸುಪ್ರೀಂ ಕೊರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಎಂಬುವರು, ಜಾಮಾ ಮಸೀದಿಯ ಜಾಗದಲ್ಲಿ ಪುರಾತನ ಹಿಂದೂ ದೇವಸ್ಥಾನವಿತ್ತು. ಮೊಘಲ ಅರಸ ಬಾಬರ್ ಆಳ್ವಿಕೆ ಸಂದರ್ಭದಲ್ಲಿ ದೇವಸ್ಥಾನ ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ವಿಡಿಯೋ, ಫೋಟೋ ಸಮೇತ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಹೇಳಿದ್ದು, ಸಮೀಕ್ಷೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.