ಪ್ರಜಾಸ್ತ್ರ ಸುದ್ದಿ
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಭೂಷಣವೂ ಒಂದು. ಚಿತ್ರರಂಗದಲ್ಲಿ ಇವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ರಾಷ್ಟ್ರಪತಿಗಳ ಭವನದಲ್ಲಿ ನಡೆಯುವ ಸಮಾರಭಂದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿರುವ ಅನಂತ್ ನಾಗ್ ಅವರು ನಟನಾಗಿ, ಪೋಷಕ ನಟನಾಗಿ ರಂಜಿಸಿದ್ದಾರೆ. ಅವರ ಅದ್ಭುತ ನಟನೆಗೆ ಮನಸೋಲದವರೆ ಇಲ್ಲ. ಕನ್ನಡದ ನಟರೊಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ಬಂದಿರುವುದು ಎಲ್ಲರಿಗೂ ಖುಷಿಯ ವಿಚಾರವಾಗಿದೆ.
7 ಪದ್ಮವಿಭೂಷಣ, 19 ಪದ್ಮಭೂಷಣ ಹಾಗೂ 113 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಕಲೆ, ಸಾಹಿತ್ಯ, ಜಾನಪದ, ಸಂಗೀತ, ಸಿನಿಮಾ, ಕ್ರೀಡೆ, ಉದ್ಯಮ, ವೈದ್ಯಕೀಯ, ಎಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ, ಸಮಾಜ ಸೇವೆ ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಇದರಲ್ಲಿ 23 ಮಹಿಳಾ ಸಾಧಕಿಯರಿದ್ದಾರೆ. 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗುತ್ತಿದೆ.