ಪ್ರಜಾಸ್ತ್ರ ಸುದ್ದಿ
ಕಾರವಾರ(Karawara): ಜಾನಪದ ಗಾಯಕಿ(Folk Singer) ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ(88) ಅವರು ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಮನೆಯಲ್ಲಿ ನಸುಕಿನಜಾವ ಮೃತಪಟ್ಟಿದ್ದಾರೆ. ಕಳೆದ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ರಾತ್ರಿ ಕುಟುಂಬಸ್ಥರೊಂದಿಗೆ ಚೆನ್ನಾಗಿಯೇ ಮಾತನಾಡಿದ್ದರಂತೆ.
ಹಾಲಕ್ಕಿ ಜಾನಪದ ಹಾಡುಗಳನ್ನು ಹಾಡುವ ಮೂಲಕ ಒಂದು ಪರಂಪರೆಯನ್ನು ಉಳಿಸಿಕೊಂಡು ಬಂದಿದ್ದರು. ಇದರ ಜೊತೆಗೆ ಗ್ರಾಮಗಳಲ್ಲಿ ಮದ್ಯ ಮಾರಾಟದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದರು. ಎಲ್ಲರಿಂದ ಸುಕ್ರಜ್ಜಿ ಎಂದೇ ಖ್ಯಾತಿಗಳಿಸಿದ್ದರು. 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ, 2017ರಲ್ಲಿ ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ(Padmashri Award) ಪ್ರಶಸ್ತಿಗೆ ಭಾಜನರಾಗಿದ್ದರು.