ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಪ್ಯಾಲೆಸ್ಟೀನ್(Palestine Flag) ಬಾವುಟವನ್ನು ಹಿಡಿದು ಎರಡು ಬೈಕ್ ಗಳಲ್ಲಿ ಭಾನುವಾರ 6 ಜನರು ಓಡಾಡಿದ್ದರು. ದಂಟರಮಕ್ಕಿ ಕೆರೆ ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ರೌಂಡ್ ಹೊಡೆದಿದ್ದರು. ಈ ಸಂಬಂಧ ಎಲ್ಲ 6 ಆರೋಪಿಗಳನ್ನು ಬಂಧಿಸಿದ್ದು, ಇವರೆಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಸ್ಕೂಟರ್ ಸಮೇತ ಆರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ಯಾಲೆಸ್ಟೀನ್ ಬಾವುಟ ಹಿಡಿದುಕೊಂಡು ಘೋಷಣೆ ಕೂಗುತ್ತಾ ಸ್ಕೂಟರ್ ನಲ್ಲಿ ಓಡಾಡಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಘಟನೆ ಸಂಬಂಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಚಿಕ್ಕಮಗಳೂರು ನಗರ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.