ಜು.22ರಿಂದ ಸಂಸತ್ ಬಜೆಟ್ ಅಧಿವೇಶನ

55

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಜುಲೈ 22ರಿಂದ ಆಗಸ್ಟ್ 12ರ ತನಕ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ.

ಸಂಸತ್ ಅಧಿವೇಶನ ಕರೆಯುವ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೋದಿ 3ನೇ ಅವಧಿಗೆ ಪ್ರಧಾನಿಯಾದ ಮೇಲೆ ನಡೆಯುತ್ತಿರುವ ಮೊದಲ ಬಜೆಟ್ ಅಧಿವೇಶನವಿದು.




error: Content is protected !!